ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ
ಸಾರ್ವಜನಿಕ ಆರೋಗ್ಯದ ದೊಡ್ಡ ಬೆದರಿಕೆಗಳಲ್ಲಿ ತಂಬಾಕು ಸೇವನೆಯು ಒಂದಾಗಿದೆ, ಇದು ವಿಶ್ವದಾದ್ಯಂತ ವರ್ಷಕ್ಕೆ 8 ದಶಲಕ್ಷ ಕ್ಕೂ ಹೆಚ್ಚು ಜನರನ್ನು ಕೊಲ್ಲುತ್ತಿದೆ. ಪ್ರತ್ಯಕ್ಷ ಧೂಮಪಾನ ಮಾಡುವುದರಿಂದ ಸುಮಾರು ದಶಲಕ್ಷಗಳಷ್ಟು ಜನ ಸಾವಿಗೀಡಾದರೆ ಧೂಮಪಾನ ಮಾಡದವರೂ ಪರೋಕ್ಷ ಧೂಮಪಾನಕ್ಕೆ ಬಲಿಯಾಗಿ 1.2 ದಶಲಕ್ಷ ಜನರು ಸಾವಿಗೀಡಾಗುತ್ತಿದ್ದಾರೆ. ವಿಶ್ವದಾದ್ಯಂತ ಇರುವ 1.1 ಶತಕೋಟಿ ಧೂಮಪಾನಿಗಳಲ್ಲಿ ಸುಮಾರು 80 % ರಷ್ಟು ಜನ ಕಡಿಮೆ ಮತ್ತು ಮಧ್ಯಮ ಆದಾಯದ ದೇಶಗಳಲ್ಲಿ ವಾಸಿಸುತ್ತಿದ್ದಾರೆ. ಅಲ್ಲಿ ತಂಬಾಕು ಸಂಬಂಧಿತ ಕಾಯಿಲೆ ಮತ್ತು ಸಾವಿನ ಪ್ರಮಾಣ ಹೆಚ್ಚಾಗಿದೆ. ಮನೆಯ ದೈನಂದಿನ ಆಹಾರ ಮತ್ತು ಮೂಲಭೂತ ಅಗತ್ಯಗಳಿಗೆ ವೆಚ್ಚಗಳನ್ನು ಮಾಡುವ ಬದಲಾಗಿ ತಂಬಾಕಿಗೆ ಖರ್ಚು ಮಾಡುವ ಮೂಲಕ ತಂಬಾಕು ಬಳಕೆಯು ಬಡತನಕ್ಕೆ ಕಾರಣವಾಗಿದೆ.
ಭಾರತ ಸರ್ಕಾರ 2007-08 ಎಲ್ಲಿ 11ನೇ ಪಂಚವಾರ್ಷಿಕ ಯೋಜನೆಯ ಅವಧಿಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು (ಎನ್.ಟಿ.ಸಿ.ಪಿ) ಯನ್ನು ಪ್ರಾರಂಭಿಸಿತು. ವಿಶ್ವ ವಯಸ್ಕರ ತಂಬಾಕು ಸಮೀಕ್ಷೆ (ಜಿ.ಎ.ಟಿ.ಎಸ್) 2009-10 ರಂತೆ ತಂಬಾಕು ಬಳಕೆಯ ಪ್ರಮಾಣವನ್ನು ಸೂಚಿಸುತ್ತದೆ. 12ನೇ ಪಂಚವಾರ್ಷಿಕ ಯೋಜನೆಯ ಅಂತ್ಯದ ವೇಳೆಗೆ ತಂಬಾಕು ಬಳಕೆಯನ್ನು 5% ರಷ್ಟು ಕಡಿಮೆ ಮಾಡುವ ಗುರಿಯನ್ನು 12 ನೇ ಪಂಚವಾರ್ಷಿಕ ಯೋಜನೆಯಲ್ಲಿ ಹಾಕಿಕೊಳ್ಳಲಾಗಿತ್ತು. ಜಿ.ಎ.ಟಿ.ಎಸ್ 2ನೇ ಸಮೀಕ್ಷೆ ಪ್ರಕಾರ ತಂಬಾಕು ಬಳಸುವವರ ಸಂಖ್ಯೆ ಸುಮಾರು 81 ಲಕ್ಷ(8.1 ದಶಲಕ್ಷ) ಕಡಿಮೆಯಾಗಿದೆ.
ಕರ್ನಾಟಕದ ಎಲ್ಲಾ 31 ಜಿಲ್ಲೆಗಳಲ್ಲಿ ಎನ್.ಟಿ.ಸಿ.ಪಿ ಯನ್ನು ಜಾರಿಗೆ ತರಲಾಗಿದೆ. 2017-18 ನೇ ಸಾಲಿನಲ್ಲಿ ಎನ್.ಟಿ.ಸಿ.ಪಿ ಯನ್ನು ಜಿಲ್ಲೆಯಲ್ಲಿ ಜಾರಿಗೆ ತರುವ ಮುಖಾಂತರ 2017-18 ನೇ ಸಾಲಿನಿಂದಲೂ ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಉದ್ದೇಶಗಳು.
- ತಂಬಾಕು ಸೇವನೆಯ ಹಾನಿಕಾರಕ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದು.
- ತಂಬಾಕು ಉತ್ಪನ್ನಗಳ ಸೇವನೆ, ಉತ್ಪಾದನೆ ಮತ್ತು ಪೂರೈಕೆಯನ್ನು ಕಡಿಮೆ ಮಾಡುವುದು.
- ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ (ಕೋಟ್ಪಾ-2003) ರನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವುದು.
- ತಂಬಾಕು ಬಳಕೆಯನ್ನು ತ್ಯಜಿಸಲು ಸೇವೆಯನ್ನು ಒದಗಿಸುವುದು.
- ತಂಬಾಕು ನಿಯಂತ್ರಣ ಮತ್ತು ತಡೆಗಟ್ಟುವಿಕೆಗಾಗಿ ವಿಶ್ವ ಆರೋಗ್ಯ ಸಂಸ್ಥೆಯ ಎಫ್.ಸಿ.ಟಿ.ಸಿ ಯ ಕಾರ್ಯತಂತ್ರಗಳನ್ನು ಅನುಷ್ಠಾನ ಮಾಡುವುದು.
ಎನ್.ಟಿ.ಸಿ.ಪಿಯ ರಚನೆ
ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನಿಯಂತ್ರಣದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕೋಶವನ್ನು ರಚಿಸಲಾಗಿದೆ. ನೀತಿ ರೂಪಿಸುವಿಕೆ, ಯೋಜನೆ ತಯಾರಿ ಮತ್ತು ತಂಬಾಕು ನಿಯಂತ್ರಣ ಕಾರ್ಯಕ್ರಮದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಾಡುವುದು ಇದರ ಜವಾಬ್ದಾರಿಯಾಗಿರುತ್ತದೆ. ರಾಷ್ಟ್ರೀಯ ತಂಬಕು ನಿಯಂತ್ರಣ ಕೋಶವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ಜಂಟಿ ನಿರ್ದೇಶಕರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತದೆ.
ರಾಷ್ಟ್ರಮಟ್ಟದ ಕಾರ್ಯಕ್ರಮಗಳು
- ಸಾರ್ವಜನಿಕರ ಜಾಗೃತಿ, ಮಾಧ್ಯಮ ಜಾಗೃತಿ ಅಭಿಯಾನ ಮತ್ತು ಸಾಮಾಜಿಕ ವರ್ತನೆ ಬದಲಾವಣೆ ಅಗತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.
- ರಾಷ್ಟ್ರಮಟ್ಟದಲ್ಲಿ ತಂಬಾಕು ಉತ್ಪನ್ನಗಳ ಪರೀಕ್ಷೆಯ ಪ್ರಯೋಗಾಲಯಗಳನ್ನು ಸ್ಥಾಪಿಸಿ ನಿರ್ವಹಣೆ ಮಾಡುವುದು.
- ಇತರ ನೊಡೆಲ್ ಇಲಾಖೆಗಳ ಸಮನ್ವಯದೊಂದಿಗೆ ಪರ್ಯಾಯ ಬೆಳೆಗಳು ಜೀವನೋಪಾಯಕ್ಕೆ ಅಗತ್ಯವಿರುವ ಸಂಶೋಧನೆಯ ಹಾಗೂ ತರಭೇತಿಗಳನ್ನು ಆಯೋಜಿಸುವುದು.
- ಕಣ್ಗಾವಲು ಸೇರಿದಂತೆ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನವನ್ನು ನಡೆಸುವುದು.
- ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಆರೋಗ್ಯ ಸೇವೆ ನೀಡುವಲ್ಲಿ ಒಂದು ಭಾಗವಾಗಿ ಕಾರ್ಯನಿರ್ವಹಿಸುವುದು.
ರಾಜ್ಯ ಮಟ್ಟದಲ್ಲಿ
- ರಾಜ್ಯಮಟ್ಟದಲ್ಲಿ ತಂಬಾಕು ನಿಯಂತ್ರಣ ಮಾಡಲು ಕೋಟ್ಪಾ-2003 ರ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಹಾಗೂ ಮೇಲ್ವಿಚಾರಣೆ ಮಾಡುವುದು.
- ರಾಜ್ಯಮಟ್ಟದಲ್ಲಿ ಅಡ್ವಕೆಸಿ ಕಾರ್ಯಾಗಾರವನ್ನು ಆಯೋಜಿಸುವುದು.
- ಜಿಲ್ಲಾಮಟ್ಟದಲ್ಲಿ ಎನ್.ಟಿ.ಸಿ.ಪಿ ಕಾರ್ಯಕ್ರಮದಡಿಯಲ್ಲಿ ನೇಮಕಗೊಂಡು ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಭೇತಿಗಳನ್ನು ಆಯೋಜಿಸುವುದು.
- ವಿವಿಧ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪುನರ್ ಮನನ ತರಭೇತಿಗಳನ್ನು ಆಯೋಜಿಸುವುದು.
- ತಂಬಾಕು ವ್ಯಸನ ಬಿಡಿಸಲು ವ್ಯಸನಮುಕ್ತ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ವೃತ್ತಿ ಪರರಿಗೆ ಹಾಗೂ ಆರೋಗ್ಯ ಸೇವಾ ಕಾರ್ಯಕರ್ತರಿಗೆ ತರಭೇತಿ ನೀಡುವುದು.
- ಕೋಟ್ಪಾ-2003 ಕಾಯ್ದೆಯ ಅನುಷ್ಠಾನ ಮಾಡುವುದು ಕಾನೂನು ಜಾರಿ ಅಧಿಕಾರಿಗಳಿಗೆ ಕಾನೂನು ತರಬೇತಿಗಳನ್ನು ಆಯೋಜಿಸುವುದು.
ಜಿಲ್ಲಾ ಮಟ್ಟದಲ್ಲಿ
- ಕಾನೂನು ಜಾರಿ ಅಧಿಕಾರಿಗಳಿಗೆ, ಶಾಲಾ ಶಿಕ್ಷಕರಿಗೆ, ಕಾಲೇಜು ಉಪನ್ಯಾಸಕರಿಗೆ ಸಾಮಾಜಿಕ ಕಾರ್ಯಕರ್ತರು ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳಿಗೆ ಮತ್ತು ಪಂಚಾಯ್ತಿ ಮಟ್ಟದ ಅಧಿಕಾರಿಗಳಿಗೆ ತರಭೇತಿಯನ್ನು ಆಯೋಜಿಸುವುದು.
- ಮಾಹಿತಿ ಶಿಕ್ಷಣ ಸಂವಹನ (ಐ.ಇ.ಸಿ) ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಹದಿಹರೆಯದ ವಯಸ್ಸಿನವರು ತಂಬಾಕು ವ್ಯಸನಕ್ಕೆ ಬಲಿಯಾದಂತೆ ಜಾಗೃತಿ ಮೂಡಿಸುವುದು.
- ಶಾಲಾ/ ಕಾಲೇಜು ಅರಿವು ಕಾರ್ಯಕ್ರಮಗಳನ್ನು ಆರೋಜಿಸಿ ಹದಿಹರೆಯದ ವಯಸ್ಸಿನವರು ತಂಬಾಕು ವ್ಯಸನಕ್ಕೆ ಬಲಿಯಾದಂತೆ ಜಾಗೃತಿ ಮೂಡಿಸುವುದು.
- ನಗರ ಸ್ಥಳೀಯ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮನ್ವಯದೊಂದಿಗೆ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ತಳಮಟ್ಟದಲ್ಲಿ ಅನುಷ್ಠಾನಗೊಳಿಸುವುದು.
- ಪೋಲೀಸ್ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕೋಟ್ಪಾ ಕಾಯ್ದೆಯ ಉಲ್ಲಂಘನೆಗಳನ್ನು ಪತ್ತೆ ಮಾಡಿ ಉಲ್ಲಂಘನೆ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದು.
ಜಿಲ್ಲೆಯಲ್ಲಿ ಆಯೋಜಿಸಿರುವ ವಿನೂತನ ಕಾರ್ಯಕ್ರಮವು ಗುಲಾಬಿ ಆಂದೋಲನ
ಧೂಮಪಾನ ಮತ್ತು ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಹಾಗೂ ಕೋಟ್ಪಾ ಕಾಯ್ದೆಯನ್ನು ಉಲ್ಲಂಘನೆ ಮಾಡದಂತೆ ಸಾರ್ವಜನಕರಿಗೆ ಗುಲಾಬಿ ಹೂ ಮತ್ತು ಕರಪತ್ರವನ್ನು ನೀಡಿ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ಮನವರಿಕೆ ಮಾಡುವುದೇ ಗುಲಬಿ ಆಂದೋಲನದ ಕಾರ್ಯತಂತ್ರವಾಗಿದೆ.
ಜಿಲ್ಲೆಯಲ್ಲಿ ಇಂತಹ ಅನೇಕ ವಿನೂತನ ಕಾರ್ಯಕ್ರಮಗಳನ್ನು ಮಾಡುವ ಮುಖಾಂತರ ಜನರಲ್ಲಿ ಅರಿವು ಮೂಡಿಸಲಾಗುತ್ತದೆ.
ಲಿಂಕ್‌ಗಳು:
ಕೋಟ್ಪಾಕಾನೂನುಕೈಪಿಡಿ:
ಕೋಟ್ಪಾಕಾಯ್ದೆಯಪ್ರತಿ:
https://www.tobaccocontrollaws.org/files/live/India/India%20-%20COTPA.pdf
ಎನ್.ಟಿ.ಸಿ.ಪಿಯಮಾರ್ಗಸೂಚಿಗಳುhttps://nhm.gov.in/NTCP/Manuals_Guidelines/Operational_Guidelines-NTCP.pdf
ಇತರೆಲಿಂಕ್‌ಗಳು:
https://www.who.int/fctc/about/en
ಶ್ರೀ ಅಮರೇಶ್ .ಎಚ್ ಅಪರ ಜಿಲ್ಲಾಧಿಕಾರಿಗಳು ಚಿಕ್ಕಬಳ್ಳಾಪುರ ರವರು, ವಿಶ್ವ ತಂಬಾಕು ರಹಿತ ದಿನದ ಪ್ರಯುಕ್ತ ಮಾತನಾಡಿದ್ದಾರೆ . | ಶ್ರೀ ಶಿವಶಂಕರ್ P, ಸಿಇಓ ಜಿಲ್ಲಾ ಪಂಚಾಯತಿ ಚಿಕ್ಕಬಳ್ಳಾಪುರ ರವರು , ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ ಮಾಹಿತಿ ನೀಡಿದರು . |
ಶ್ರೀ ಮಿಥುನ್ ಕುಮಾರ್ ಜಿಲ್ಲಾ ಪೊಲೀಸ್ ಅಧೀಕ್ಷಕರು ಚಿಕ್ಕಬಳ್ಳಾಪುರ ರವರು, ವಿಶ್ವ ತಂಬಾಕು ರಹಿತ ದಿನದ ಪ್ರಯುಕ್ತ ಮಾತನಾಡಿದ್ದಾರೆ . | Dr.ಇಂದಿರಾ ಆರ್ ಕಬಾಡೆ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಚಿಕ್ಕಬಳ್ಳಾಪುರ ರವರು, ವಿಶ್ವ ತಂಬಾಕು ರಹಿತ ದಿನದ ಪ್ರಯುಕ್ತ ಮಾತನಾಡಿದ್ದಾರೆ. |