ಪ್ರಕಟಣೆಗಳು
Filter Past ಪ್ರಕಟಣೆಗಳು
| ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
|---|---|---|---|---|
| ಸುಭಾಷ್ ಚಂದ್ರ ಬೋಸ್ ಆಪದಾ ಪ್ರಬಂಧನ ಪ್ರಶಸ್ತಿ – ವಿಪತ್ತು ನಿರ್ವಹಣೆಯಲ್ಲಿ ಶ್ರೇಷ್ಠತೆಗೆ ಮಾನ್ಯತೆ | ಸುಭಾಷ್ ಚಂದ್ರ ಬೋಸ್ ಆಪದಾ ಪ್ರಬಂಧನ ಪ್ರಶಸ್ತಿ 2027ಭಾರತ ಸರ್ಕಾರವು ಸುಭಾಷ್ ಚಂದ್ರ ಬೋಸ್ ಆಪದಾ ಪ್ರಬಂಧನ ಪ್ರಶಸ್ತಿಯನ್ನು ಸ್ಥಾಪಿಸಿದ್ದು, ವಿಪತ್ತು ನಿರ್ವಹಣೆಯ ಕ್ಷೇತ್ರದಲ್ಲಿ ವ್ಯಕ್ತಿಗಳು ಮತ್ತು ಸಂಸ್ಥೆಗಳು ಮಾಡಿದ ಅತ್ಯುತ್ತಮ ಕಾರ್ಯಗಳನ್ನು ಗೌರವಿಸಲು ಉದ್ದೇಶಿಸಿದೆ. ಇದರಲ್ಲಿ ತಡೆಗಟ್ಟುವಿಕೆ, ಶಮನ, ಸಿದ್ಧತೆ, ರಕ್ಷಣಾ ಕಾರ್ಯ, ಪ್ರತಿಕ್ರಿಯೆ, ಪರಿಹಾರ, ಪುನರ್ವಸತಿ, ಸಂಶೋಧನೆ/ನವೀನತೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳು ಒಳಗೊಂಡಿವೆ. ಅರ್ಹತೆ
ಪ್ರಶಸ್ತಿ ವಿವರವೈಯಕ್ತಿಕ ಮತ್ತು ಸಂಸ್ಥೆಗಳ ವಿಭಾಗಗಳಲ್ಲಿ ವಿಜೇತರಿಗೆ ಸ್ಕ್ರೋಲ್ (Scroll) ನೀಡಲಾಗುತ್ತದೆ. ಇದಲ್ಲದೆ, ಸಂಸ್ಥೆಗೆ ಫಲಕ (Plaque) ಹಾಗೂ ವ್ಯಕ್ತಿಗೆ ಪದಕ (Medal) ನೀಡಲಾಗುತ್ತದೆ. ಪ್ರಶಸ್ತಿ ಗ್ರಾಹಕರ ಸಂಖ್ಯೆ3 (ಮೂರು) ನಾಮನಿರ್ದೇಶನ ಮಾಡುವವರು ಯಾರು?ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಈ ಪ್ರಶಸ್ತಿಗೆ ವ್ಯಕ್ತಿ ಅಥವಾ ಸಂಸ್ಥೆಯನ್ನು ನಾಮನಿರ್ದೇಶನ ಮಾಡಬಹುದು. ಅರ್ಜಿಗಳನ್ನು ವರ್ಷಪೂರ್ತಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆಮೂರು ಹಂತಗಳ ಪರಿಶೀಲನಾ ಪ್ರಕ್ರಿಯೆ ಅನುಸರಿಸಲಾಗುತ್ತದೆ:
ಕಾರ್ಯಕ್ರಮ ವಿವರಈ ಪ್ರಶಸ್ತಿಯನ್ನು ಪ್ರತಿ ವರ್ಷ ಜನವರಿ 23 ರಂದು, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದಂದು ಘೋಷಿಸಲಾಗುತ್ತದೆ. ಹೆಚ್ಚಿನ ಮಾಹಿತಿಹೆಚ್ಚಿನ ಮಾಹಿತಿಗಾಗಿ ದಯವಿಟ್ಟು ಭೇಟಿ ನೀಡಿ: |
01/10/2025 | 30/09/2026 | ನೋಟ (3 MB) |
| ಪ್ರಕಟಣೆ:ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಅರೆವೈದ್ಯಕೀಯ ಹುದ್ದೆಗಳ ನೇಮಕಾತಿ. | ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2026-27ನೇ ಸಾಲಿನಲ್ಲಿ ಖಾಲಿ ಇರುವ ವಿವಿಧ ವೃಂದದ ಅರೆ ವೈದ್ಯಕೀಯ ಹುದ್ದೆಗಳನ್ನು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸುವ ಬಗ್ಗೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ |
01/09/2026 | 10/09/2026 | ನೋಟ (2 MB) |
| ಪ್ರಕಟಣೆ: ಕಿರಿಯ ಪ್ರಯೋಗಾಲಯ ತಾಂತ್ರಿಕ ಅಧಿಕಾರಿ, ಫಾರ್ಮಸಿ ಅಧಿಕಾರಿ ಮತ್ತು ನರ್ಸಿಂಗ್ ಅಧಿಕಾರಿ ಹುದ್ದೆಗಳ ನೇಮಕಾತಿ. | ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ, ಫಾರ್ಮಾಸಿ ಅಧಿಕಾರಿ ಹಾಗೂ ಶುಶ್ರೂಷಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ. ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ, ಫಾರ್ಮಾಸಿ ಅಧಿಕಾರಿ ಹಾಗೂ ಶುಶ್ರೂಷಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ |
24/08/2026 | 03/09/2026 | ನೋಟ (1 MB) |
| ಪ್ರಕಟಣೆ: ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ | ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಿನಾಂಕ 15.06.2026 ಬೆಳಿಗ್ಗೆ 11.00 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಮುಂದುವರೆದು, ಖಾಲಿ ಹುದ್ದೆಗಳನ್ನು ಪ್ರತಿ ಸೋಮವಾರ ನೇರ ಸಂದರ್ಶನದ ಮೂಲಕ ಮೂಲ ದಾಖಲೆಗಳನ್ನು ಪರಿಶೀಲಿಸಿ ನೇಮಕ ಮಾಡಿಕೊಳ್ಳಲಾಗುವುದು. |
09/06/2026 | 31/08/2026 | ನೋಟ (1 MB) |
| ಪ್ರಕಟಣೆ : ಸಮುದಾಯ ಆರೋಗ್ಯ ಅಧಿಕಾರಿಯ ನೇಮಕಾತಿ | ಚಿಕ್ಕಬಳ್ಳಾಪುರ ಜಿಲ್ಲಾ ಆಯುಷ್ ಕಛೇರಿ ವ್ಯಾಪ್ತಿಯಲ್ಲಿ ಬರುವ ಕೇಂದ್ರ ಪುರಸ್ಕೃತ ಯೋಜನೆಯಾದ ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಅಭಿರುದ್ದಿಪಡಿಸಲಾದ ಆಯುಷ್ ಆರೋಗ್ಯ ಮಂದಿರ , ಸೋಮೇನಹಳ್ಳಿ , ಗುಡಿಬಂಡೆ ತಾ।। ಇಲ್ಲಿಗೆ ಸಮುದಾಯ ಆರೋಗ್ಯ ಅಧಿಕಾರಿ / Community Health Officer (CHO)ಹುದ್ದೆಯನ್ನು ಸಂಪೂರ್ಣ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. |
01/08/2026 | 31/08/2026 | ನೋಟ (611 KB) Application Form (270 KB) |
| ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಸೂಕ್ತ ಪರಿಹಾರದ ಹಕ್ಕು, ಮತ್ತು ಪುನರ್ ನಿರ್ಮಾಣ | ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಸೂಕ್ತ ಪರಿಹಾರದ ಹಕ್ಕು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ ೨೦೧೩ ರ ಕಲಂ ೧೯(೧) ರ ಮೇರೆಗೆ ಅಧಿಸೂಚನೆ |
04/03/2026 | 15/04/2026 | ನೋಟ (1,023 KB) |
| ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ನೇಮಕಾತಿಗಾಗಿ ನೇರ ಸಂದರ್ಶನ | ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು 16-03-2026 ರಂದು ತಮ್ಮ ಮೂಲ ದಾಖಲೆಗಳೊಂದಿಗೆ ಪರಿಶೀಲನೆಗಾಗಿ ಸಂದರ್ಶನಕ್ಕೆ ಹಾಜರಾಗಬೇಕು. |
13/03/2026 | 16/03/2026 | ನೋಟ (932 KB) |
| ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖಾಲಿ ಇರುವ ತಜ್ಞರು ಮತ್ತು GDMO ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುವ ಬಗ್ಗೆ | ಚಿಕ್ಕಬಳ್ಳಾಪುರ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಸಮುದಾಯ ಆರೋಗ್ಯ ಕೇಂದ್ರ ಹೊಸೂರು ಇಲ್ಲಿ ಖಾಲಿ ಇರುವ ತಜ್ಞ ವೈದ್ಯರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ. |
19/01/2026 | 19/02/2026 | ನೋಟ (798 KB) |
| ಕರ್ನಾಟಕ ರಾಜ್ಯಪತ್ರ : ಭೂಸ್ವಾಧೀನ : ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರವಾಸಿ ತಾಣವಾದ ನಂದಿ ಬೆಟ್ಟದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ರೋಪ್ -ವೇ ಅಳವಡಿಸಿ ಅಭಿವೃದ್ಧಿ ಪಡಿಸುವ ಸಲುವಾಗಿ | ಕರ್ನಾಟಕ ರಾಜ್ಯಪತ್ರ : ಭೂಸ್ವಾಧೀನ : ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರವಾಸಿ ತಾಣವಾದ ನಂದಿ ಬೆಟ್ಟದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ರೋಪ್ -ವೇ ಅಳವಡಿಸಿ ಅಭಿವೃದ್ಧಿ ಪಡಿಸುವ ಸಲುವಾಗಿ. |
23/10/2025 | 31/01/2026 | ನೋಟ (4 MB) |
| NHM ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ (2025–2026) | 2025-26 ನೇ ಸಾಲಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ NHM ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ವಿವಿಧ ವೃಂದದ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ |
08/01/2026 | 14/01/2026 | ನೋಟ (6 MB) |