ಹೊಸತೇನಿದೆ
ಪ್ರಕಟಣೆ: ಸ್ವತಂತ್ರ ಹಾಸ್ಟೆಲ್‌ಗಳು, ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್‌ಗಳು ಹಾಗೂ ಮಕ್ಕಳ ವಸತಿಯುತ ಶಾಲೆಗಳು ಅಥವಾ ಕಾಲೇಜುಗಳ ನೋಂದಣಿಯನ್ನು ಮಂಜೂರು ಮಾಡುವ ಕುರಿತಾದ ಅರ್ಜಿ.
ಪ್ರಕಟಿಸಿದ ದಿನಾಂಕ: 05/10/2026ಜಿಲ್ಲೆಯಲ್ಲಿ ಇರುವ 6 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ / ಸರ್ಕಾರೇತರ ವಸತಿ ನಿಲಯಗಳ, ವಸತಿಯುತ ಶಾಲೆ/ಕಾಲೇಜುಗಳನ್ನು, Stand-Alone Hostel for Children , ಅಡಿ ನೊಂದಾಯಿಸಿಕೊಳ್ಳಲು ಉಚಿತವಾಗಿ ಪತ್ರಿಕಾ ಪ್ರಕಟಣೆ ನೀಡುವ ಬಗ್ಗೆ. ನೋಂದಣಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಕಟಣೆ: ಚಿಕ್ಕಬಳ್ಳಾಪುರದ ಒಳನಾಡು ಮೀನುಗಾರಿಕೆ ಅಭಿವೃದ್ಧಿ ಸಹಾಯ ಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಫಲಾನುಭವಿಗಳಿಂದ ಮೀನುಗಾರಿಕೆ ಸಲಕರಣೆ ಕಿಟ್‌ಗಳಿಗಾಗಿ ಅರ್ಜಿ.
ಪ್ರಕಟಿಸಿದ ದಿನಾಂಕ: 10/09/2026ಒಳನಾಡು ಮೀನುಗಾರಿಕೆ ಅಭಿವೃದ್ಧಿ ಸಹಾಯ ಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಫಲಾನುಭವಿಗಳಿಂದ ಹಾಗೂ ಸಮಗ್ರ ಮೀನುಗಾರಿಕೆ ಅಭಿವೃದ್ಧಿಸಹಾಯ ಯೋಜನೆಯಡಿ ಸಾಮಾನ್ಯ/ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಫಲಾನುಭವಿಗಳಿಂದ ಮೀನುಗಾರಿಕೆ ಸಲಕರಣೆಗಳ ಕಿಟ್‌ಗಳಿಗಾಗಿ ಅರ್ಜಿ. ಈ ಅರ್ಜಿಯನ್ನು ಅಕ್ಟೋಬರ್ 26 ರಂದು ಸಂಜೆ 5:30 ರವರೆಗೆ ವಿಸ್ತರಿಸಲಾಗಿದೆ. ಯೋಜನೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಕಟಣೆ:ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಅರೆವೈದ್ಯಕೀಯ ಹುದ್ದೆಗಳ ನೇಮಕಾತಿ.
ಪ್ರಕಟಿಸಿದ ದಿನಾಂಕ: 01/09/2026ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2026-27ನೇ ಸಾಲಿನಲ್ಲಿ ಖಾಲಿ ಇರುವ ವಿವಿಧ ವೃಂದದ ಅರೆ ವೈದ್ಯಕೀಯ ಹುದ್ದೆಗಳನ್ನು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸುವ ಬಗ್ಗೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಕಟಣೆ: ಕಿರಿಯ ಪ್ರಯೋಗಾಲಯ ತಾಂತ್ರಿಕ ಅಧಿಕಾರಿ, ಫಾರ್ಮಸಿ ಅಧಿಕಾರಿ ಮತ್ತು ನರ್ಸಿಂಗ್ ಅಧಿಕಾರಿ ಹುದ್ದೆಗಳ ನೇಮಕಾತಿ.
ಪ್ರಕಟಿಸಿದ ದಿನಾಂಕ: 24/08/2026ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ, ಫಾರ್ಮಾಸಿ ಅಧಿಕಾರಿ ಹಾಗೂ ಶುಶ್ರೂಷಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ. ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ, ಫಾರ್ಮಾಸಿ ಅಧಿಕಾರಿ ಹಾಗೂ ಶುಶ್ರೂಷಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ. ಅರ್ಜಿ ಸಲ್ಲಿಸಲು ಇಲ್ಲಿ […]
ಪ್ರಕಟಣೆ : ಸಮುದಾಯ ಆರೋಗ್ಯ ಅಧಿಕಾರಿಯ ನೇಮಕಾತಿ
ಪ್ರಕಟಿಸಿದ ದಿನಾಂಕ: 01/08/2026ಚಿಕ್ಕಬಳ್ಳಾಪುರ ಜಿಲ್ಲಾ ಆಯುಷ್ ಕಛೇರಿ ವ್ಯಾಪ್ತಿಯಲ್ಲಿ ಬರುವ ಕೇಂದ್ರ ಪುರಸ್ಕೃತ ಯೋಜನೆಯಾದ ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಅಭಿರುದ್ದಿಪಡಿಸಲಾದ ಆಯುಷ್ ಆರೋಗ್ಯ ಮಂದಿರ , ಸೋಮೇನಹಳ್ಳಿ , ಗುಡಿಬಂಡೆ ತಾ।। ಇಲ್ಲಿಗೆ ಸಮುದಾಯ ಆರೋಗ್ಯ ಅಧಿಕಾರಿ / Community Health Officer (CHO)ಹುದ್ದೆಯನ್ನು ಸಂಪೂರ್ಣ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರಕಟಣೆ: ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ
ಪ್ರಕಟಿಸಿದ ದಿನಾಂಕ: 09/06/2026ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಿನಾಂಕ 15.06.2026 ಬೆಳಿಗ್ಗೆ 11.00 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಮುಂದುವರೆದು, ಖಾಲಿ ಹುದ್ದೆಗಳನ್ನು ಪ್ರತಿ ಸೋಮವಾರ ನೇರ ಸಂದರ್ಶನದ ಮೂಲಕ ಮೂಲ ದಾಖಲೆಗಳನ್ನು ಪರಿಶೀಲಿಸಿ ನೇಮಕ ಮಾಡಿಕೊಳ್ಳಲಾಗುವುದು.
ಸುಭಾಷ್ ಚಂದ್ರ ಬೋಸ್ ಆಪದಾ ಪ್ರಬಂಧನ ಪ್ರಶಸ್ತಿ – ವಿಪತ್ತು ನಿರ್ವಹಣೆಯಲ್ಲಿ ಶ್ರೇಷ್ಠತೆಗೆ ಮಾನ್ಯತೆ
ಪ್ರಕಟಿಸಿದ ದಿನಾಂಕ: 13/04/2026ಸುಭಾಷ್ ಚಂದ್ರ ಬೋಸ್ ಆಪದಾ ಪ್ರಬಂಧನ ಪ್ರಶಸ್ತಿ 2027 ಭಾರತ ಸರ್ಕಾರವು ಸುಭಾಷ್ ಚಂದ್ರ ಬೋಸ್ ಆಪದಾ ಪ್ರಬಂಧನ ಪ್ರಶಸ್ತಿಯನ್ನು ಸ್ಥಾಪಿಸಿದ್ದು, ವಿಪತ್ತು ನಿರ್ವಹಣೆಯ ಕ್ಷೇತ್ರದಲ್ಲಿ ವ್ಯಕ್ತಿಗಳು ಮತ್ತು ಸಂಸ್ಥೆಗಳು ಮಾಡಿದ ಅತ್ಯುತ್ತಮ ಕಾರ್ಯಗಳನ್ನು ಗೌರವಿಸಲು ಉದ್ದೇಶಿಸಿದೆ. ಇದರಲ್ಲಿ ತಡೆಗಟ್ಟುವಿಕೆ, ಶಮನ, ಸಿದ್ಧತೆ, ರಕ್ಷಣಾ ಕಾರ್ಯ, ಪ್ರತಿಕ್ರಿಯೆ, ಪರಿಹಾರ, ಪುನರ್ವಸತಿ, ಸಂಶೋಧನೆ/ನವೀನತೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳು ಒಳಗೊಂಡಿವೆ. ಅರ್ಹತೆ ಈ ಪ್ರಶಸ್ತಿಗೆ ಭಾರತೀಯ ನಾಗರಿಕರು ಹಾಗೂ ಭಾರತೀಯ ಸಂಸ್ಥೆಗಳು ಮಾತ್ರ ಅರ್ಹರಾಗಿರುತ್ತಾರೆ. ಸ್ವಯಂಸೇವಾ ಸಂಸ್ಥೆಗಳು, ಕಾರ್ಪೊರೇಟ್ ಸಂಸ್ಥೆಗಳು, […]
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ನೇಮಕಾತಿಗಾಗಿ ನೇರ ಸಂದರ್ಶನ
ಪ್ರಕಟಿಸಿದ ದಿನಾಂಕ: 13/03/2026ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು 16-03-2026 ರಂದು ತಮ್ಮ ಮೂಲ ದಾಖಲೆಗಳೊಂದಿಗೆ ಪರಿಶೀಲನೆಗಾಗಿ ಸಂದರ್ಶನಕ್ಕೆ ಹಾಜರಾಗಬೇಕು.
ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಸೂಕ್ತ ಪರಿಹಾರದ ಹಕ್ಕು, ಮತ್ತು ಪುನರ್ ನಿರ್ಮಾಣ
ಪ್ರಕಟಿಸಿದ ದಿನಾಂಕ: 04/03/2026ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಸೂಕ್ತ ಪರಿಹಾರದ ಹಕ್ಕು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ ೨೦೧೩ ರ ಕಲಂ ೧೯(೧) ರ ಮೇರೆಗೆ ಅಧಿಸೂಚನೆ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖಾಲಿ ಇರುವ ತಜ್ಞರು ಮತ್ತು GDMO ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುವ ಬಗ್ಗೆ
ಪ್ರಕಟಿಸಿದ ದಿನಾಂಕ: 19/01/2026ಚಿಕ್ಕಬಳ್ಳಾಪುರ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಸಮುದಾಯ ಆರೋಗ್ಯ ಕೇಂದ್ರ ಹೊಸೂರು ಇಲ್ಲಿ ಖಾಲಿ ಇರುವ ತಜ್ಞ ವೈದ್ಯರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ.